ಚಿತ್ರದುರ್ಗ: ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಬಿಜೆಪಿ ಪಕ್ಷ ಚಿತ್ರದುರ್ಗ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಯಿತು.
ಚಿತ್ರದುರ್ಗ ನಗರಸಭೆಯಲ್ಲಿ ಬಿಜೆಪಿ ಆಡಳಿತ; ಸ್ಥಾನ ಅಲಂಕರಿಸಿದ ಅಧ್ಯಕ್ಷ-ಉಪಾಧ್ಯಕ್ಷ - ಚಿತ್ರದುರ್ಗ ನಗರಸಭೆಗೆ ಹೊಸ ಅಧ್ಯಕ್ಷರ ನೇಮಕ
ಚಿತ್ರದುರ್ಗ ನಗರಸಭೆಗೆ ಆಯ್ಕೆಯಾದ ನೂತನ ಉಪಾಧ್ಯಕ್ಷರು ಮತ್ತು ಅಧ್ಯಕ್ಷರು ಇಂದು ಅಧಿಕಾರ ಸ್ವೀಕರಿಸಿದ್ರು. ಶಾಸಕ ತಿಪ್ಪಾರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಸ್ಥಾನ ಅಲಂಕರಿಸಿದ್ರು.
ಚಿತ್ರದುರ್ಗ
ಬಿಜೆಪಿ ಶಾಸಕ ತಿಪ್ಪಾರೆಡ್ಡಿ ನೇತೃತ್ವದಲ್ಲಿ ತಮ್ಮ ಸ್ಥಾನಗಳನ್ನು ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಇಬ್ಬರೂ ಅಲಂಕರಿಸಿದರು. ಚಿತ್ರದುರ್ಗ ನಗರಸಭೆಯ ಸದಸ್ಯರಾದ ತಿಪ್ಪಮ್ಮ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ವೇತ ಇಬ್ಬರು ಮಹಿಳೆಯರು ಅಧಿಕಾರ ಸ್ವೀಕರಿಸಿ ಗೆಲುವಿನ ನಗೆ ಬೀರಿದರು.
ನಗರಸಭೆಯಲ್ಲಿಂದು ಹಮ್ಮಿಕೊಂಡಿದ್ದ ಪದಗ್ರಹಣ ಕಾರ್ಯಕ್ರಮದಲ್ಲಿ ವಿಶೇಷ ಪೂಜೆ ನಡೆಸುವ ಮೂಲಕ ಸರ್ವ ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರು ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.