ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಕೋವಿಡ್ ಕೇರ್ ಸೆಂಟರ್ಗೆ ರಾಜ್ಯ ನೋಡಲ್ ಅಧಿಕಾರಿ ಡಾ. ಗೌತಮ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧರ್ಮಪುರ ಕೋವಿಡ್ ಕೇರ್ ಸೆಂಟರ್ಗೆ ನೋಡಲ್ ಅಧಿಕಾರಿ ದಿಢೀರ್ ಭೇಟಿ, ಪರಿಶೀಲನೆ - Chitradurga covid update news
ನೋಡಲ್ ಅಧಿಕಾರಿ ಡಾ. ಗೌತಮ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೊರೊನಾ ರೋಗಿಗಳ ಆರೋಗ್ಯವನ್ನು ವಿಚಾರಿಸಿ, ಸೋಂಕಿತರಿಗೆ ಸರಿಯಾದ ಸಮಯಕ್ಕೆ ಔಷಧಿ, ಊಟದ ವ್ಯವಸ್ಥೆ ಸೇರಿದಂತೆ ಸ್ವಚ್ಛತೆ ಕುರಿತು ಅಧಿಕಾರಿಗಳನ್ನು ವಿಚಾರಿಸಿ ಮಾಹಿತಿ ಪಡೆದುಕೊಂಡರು. ಜೊತೆಗೆ ಕೊರೊನಾ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಅವರಿಗೆ ಔಷಧಿ ಜೊತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಹೆಚ್ಚಿನದಾಗಿ ಸ್ವಚ್ಛತೆಯ ಬಗ್ಗೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಗೌತಮ್ ಅವರಿಗೆ ಸಹ ಸಿಬ್ಬಂದಿ ಹೇಮಂತ್ ರಾಕೇಶ್ ಗೌಡ ಹಾಗೂ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್, ವಿನಯ್ ಪ್ರಭಾಕರ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಸಾಥ್ ನೀಡಿದರು.