ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಇಂದು ಒಂದು ಕೊರೊನಾ ಕೇಸ್​ ಪತ್ತೆ: ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆ - corona positive firm

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ದೃಢವಾಗಿದ್ದು, ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

corona positive
ಚಿತ್ರದುರ್ಗದಲ್ಲಿ ಒಂದು ಕೊರೊನಾ ದೃಢ

By

Published : Jul 7, 2020, 8:46 PM IST

ಚಿತ್ರದುರ್ಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಿಟಿವ್ ದೃಢವಾಗಿದ್ದು, ಹಿರಿಯೂರು ನಗರದ 54 ವರ್ಷದ ಪುರುಷರೊಬ್ಬರಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ.

85 ಜನರ ಮೂಗು ಹಾಗೂ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ ಒಬ್ಬರ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

ಸೋಂಕಿತನನ್ನು ಚಿತ್ರದುರ್ಗ ಜಿಲ್ಲೆಯ ಕೋವಿಡ್-19 ಆಸ್ಪತ್ರೆಗೆ ರವಾನಿಸಲಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. 54 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನುಳಿದ 36 ಜನ ಕೋವಿಡ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಶತಕದತ್ತ ದಾಪುಗಾಲು ಹಾಕುತ್ತಿರುವುದರಿಂದ ಜನರಲ್ಲಿ ಆತಂಕ ಶುರುವಾಗಿದೆ.

ABOUT THE AUTHOR

...view details