ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಕೊರೊನಾಗೆ ವೃದ್ಧೆ ಬಲಿ...ಮೃತರ ಸಂಖ್ಯೆ 17ಕ್ಕೆ ಏರಿಕೆ

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಡಟದ ಕುರುಬರ ಹಟ್ಟಿ ಬಡಾವಣೆಯ 62 ವರ್ಷದ ವೃದ್ಧೆ ಮೃತಪಟ್ಟಿದ್ದು, ಸೋಂಕಿಗೊಳಗಾಗಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

Chitradurga corona case
Chitradurga corona case

By

Published : Aug 6, 2020, 4:06 PM IST

ಚಿತ್ರದುರ್ಗ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನಪ್ಪಿದ್ದು ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಮಡಟದ ಕುರುಬರ ಹಟ್ಟಿ ಬಡಾವಣೆಯ 62 ವರ್ಷದ ವೃದ್ಧೆ ಮೃತಪಟ್ಟವರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದರಿಂದ ಆ. 1 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ವೃದ್ಧೆ ಮೃತಪಟ್ಟಿದ್ದಾರೆ.

ವೃದ್ಧೆ ಸೋಂಕಿಗೊಳಗಾಗಿ ಮೃತಪಟ್ಟ ಹಿನ್ನೆಲೆ ಮಡಟದ ಕುರುಬರ ಹಟ್ಟಿ ಬಡಾವಣೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸದ್ಯ ‌ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details