ಚಿತ್ರದುರ್ಗ:ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಸಹೋದರನ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಬೈಕ್ ಸವಾರ ಪಾಪೇಶ್(22) ಮೃತ. ಕಳೆದ 5 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಎಂದು ತಿಳಿದುಬಂದಿದೆ. ಜಿಲ್ಲೆಯ ಬೆಳಗಟ್ಟ ಗ್ರಾಮದ ಬಳಿ ಈ ಘಟನೆ ನಡೆದಿದೆ.