ಚಿತ್ರದುರ್ಗ: ಜಿಲ್ಲೆಯಲ್ಲಿ ಈಗಾಗಲೇ ಇಬ್ಬರನ್ನು ಕೊರೊನಾ ಬಲಿ ಪಡೆದ ಸುದ್ದಿ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದಲ್ಲಿ ಕೊರೊನಾಗೆ ಮೂರನೇ ಬಲಿ - Chitradurgha covid death news
ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
Covid hospital
60 ವರ್ಷದ ವ್ಯಕ್ತಿಯೊಬ್ಬರು ಚಿತ್ರದುರ್ಗ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬುಧವಾರ ಇವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊರೊನಾಗೆ ಜಿಲ್ಲೆಯಲ್ಲಿ ಈವರೆಗೆ ಮೂವರು ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ವಿನೋತ್ ಪ್ರಿಯಾ ಮಾಹಿತಿ ನೀಡಿದ್ದು, ಮೃತ ಸೋಂಕಿತನ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಗೆ ಮಾಹಿತಿ ರವಾನಿಸಬೇಕಿದೆ.