ಚಿತ್ರದುರ್ಗ: ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭಿವೃದ್ಧಿಯ ಗಾಳಿ ಬೀಸುತ್ತಿದ್ದು, ಅಭಿವೃದ್ಧಿ ಆಧಾರದ ಮೇಲೆ ಚುನಾವಣೆ ಗೆಲ್ಲುತ್ತೇವೆ. ವಿರೋಧ ಪಕ್ಷಗಳು ಈಗಾಗಲೇ ಸೋಲನ್ನು ಒಪ್ಪಿಕೊಂಡಿವೆ ಎಂದು ವಿರೋಧ ಪಕ್ಷಗಳಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.
ಚಿತ್ರದುರ್ಗದಲ್ಲಿರುವ ಮಾದಾರ ಚೆನ್ನಯ್ಯ ಗುರು ಪೀಠಕ್ಕೆ ಭೇಟಿ ನೀಡಿ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಶಿರಾ ಉಪ ಚುನಾವಣೆಯಲ್ಲಿ ಕಮಲ ಅರಳುತ್ತದೆ ಎಂದು ಭವಿಷ್ಯ ನುಡಿದರು.
ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೊಳ್ಳೆ ಹೊಡೆದು ಹಣ ವಿಜಯೇಂದ್ರ ಶಿರಾ ಉಪ ಚುನಾವಣೆಗೆ ಸುರಿಯುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷಗಳು ಇಂತಹ ಮಾತುಗಳನ್ನು ಹೇಳುವುದು ಸಹಜ. ವಿರೋಧ ಪಕ್ಷದ ನಾಯಕರು ಬಹಳ ಹತಾಶೆಯಿಂದ ಈ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದು, ಚುನಾವಣೆಯಲ್ಲಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿವೆ ಎಂದು ಲೇವಡಿ ಮಾಡಿದರು. ಶಿರಾದಲ್ಲಿ ಬಿಜೆಪಿ ಸುನಾಮಿ ಎದ್ದಿದ್ದರಿಂದ ವಿರೋಧ ಪಕ್ಷಗಳ ನಿದ್ದೆಗೆಡಿಸಿದ್ದರಿಂದ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ ಎಂದರು.
ಇನ್ನು ನಾಯಕತ್ವದ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದು ಹೇಳಿ ಹೊರಟರು.