ಚಿತ್ರದುರ್ಗ: ಕೊರೊನಾ ವೈರಸ್ನಿಂದಾಗಿ ಭಯಭೀತರಾಗಿರುವ ಜನರು ಇದೀಗ ಆಯಾ ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡುವ ಜಿಲ್ಲಾಡಳಿತದ ನಡೆಗೆ ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ಗೆ ವಿರೋಧ - ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ಗೆ ವಿರೋಧ
ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲು ಆಗಮಿಸಿದ ಅಧಿಕಾರಿಗಳು, ಪೊಲೀಸರ ಜತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದು, ಸಾಮಾಜಿಕ ಅಂತರ ಮರೆತು ಗುಂಪಾಗಿ ಪ್ರತಿಭಟನೆ ಮಾಡಲು ಜಮಾಯಿಸಿದ್ದರು.
![ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ಗೆ ವಿರೋಧ Gandhi Residential School](https://etvbharatimages.akamaized.net/etvbharat/prod-images/768-512-7171248-939-7171248-1589294377100.jpg)
ಜಿಲ್ಲೆಯಲ್ಲಿ ಸಾಕಷ್ಟು ಕಡೆ ಈ ರೀತಿ ಘಟನೆಗಳು ಸಂಭವಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲೂ ಇದೇ ರೀತಿಯ ಘಟನೆ ಸಂಭವಿಸಿದೆ. ಸಿದ್ದಾಪುರ ಬಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಮುಂದಾಗಿದ್ದ ಜಿಲ್ಲಾಡಳಿತದ ನಡೆಗೆ ಗ್ರಾಮಸ್ಥರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಹಾಸ್ಟೆಲ್ ಬಳಿ ಪ್ರತಿಭಟನೆ ಕೂಡ ನಡೆದಿದೆ.
ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲು ಆಗಮಿಸಿದ ಅಧಿಕಾರಿಗಳು, ಪೊಲೀಸರ ಜತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದು, ಸಾಮಾಜಿಕ ಅಂತರ ಮರೆತು ಗುಂಪಾಗಿ ಪ್ರತಿಭಟನೆ ಮಾಡಲು ಜನರು ಜಮಾಯಿಸಿದರು. ಪ್ರತಿಭಟನಾನಿರತ ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟರು.