ಕರ್ನಾಟಕ

karnataka

ETV Bharat / state

ಭಾರತ ಬಂದ್​​: ಚಿತ್ರದುರ್ಗದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ ಕಾರ್ಮಿಕ ಸಂಘಟನೆಗಳು ಚಿತ್ರದುರ್ಗದ ನಗರದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿವೆ.

outrage-by-labor-unions-in-chitradurga
ಭಾರತ ಬಂದ್...ಚಿತ್ರದುರ್ಗದಲ್ಲಿ ಕಾರ್ಮಿಕ ಸಂಘಟನೆಗಳಿಂದ ಆಕ್ರೋಶ..!

By

Published : Jan 8, 2020, 11:21 AM IST

ಚಿತ್ರದುರ್ಗ: ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿವೆ.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಬಂದ್​​ಗೆ ಸಹಕರಿಸುವಂತೆ ನಿಂತಿದ್ದ ಬಸ್​ಗಳನ್ನು ತೆರಳುವಂತೆ ಹಾಗೂ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿಕೊಂಡಿದ್ದಾರೆ.

ಭಾರತ ಬಂದ್: ಚಿತ್ರದುರ್ಗದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಗಾಂಧಿ ಸರ್ಕಲ್​ನಲ್ಲಿ ನಿಂತಿದ್ದ ವಾಹನಗಳಿಗೆ ಬೆಂಬಲ ಕೋರಿ ಮನವಿ ಮಾಡಿದ ಬಳಿಕ ಪೊಲೀಸ್ ಠಾಣೆ ಎದುರು ಪ್ರತಿಭಟನೆಗೆ ಯತ್ನಿಸಿದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನಾನಿರತ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ಗ್ರಾಮಾಂತರ ಠಾಣೆಗೆ ಕರೆತಂದಿದ್ದು ಆಕ್ರೋಶಕ್ಕೆ ಕಾರಣವಾಯಿತು.

For All Latest Updates

ABOUT THE AUTHOR

...view details