ಚಿತ್ರದುರ್ಗ:ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಂದ ಸಲೀಸಾಗಿ ಚಿತ್ರದುರ್ಗ ಜಿಲ್ಲೆಗೆ ಜನರು ಆಗಮಿಸುತ್ತಿದ್ದು, ಪೊಲೀಸ್ ಇಲಾಖೆ ಇವರನ್ನು ಯಾವುದೇ ತಪಾಸಣೆಗೊಳಪಡಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಆಂಧ್ರಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ, ನಾಗಪ್ಪನಹಳ್ಳಿ, ಪುಟ್ಲಾರಹಳ್ಳಿ, ಜಾಜೂರು ಬಳಿ ಕಾಲು ದಾರಿಗಳಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತಲೇ ಇವೆ. ಆದರೆ, ಪೊಲೀಸರು ಮಾತ್ರ ಇದನ್ನು ನೋಡಿಯೂ ನೋಡದಂತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಲು ಕಾರಣವಾಗಿದೆ.