ಕರ್ನಾಟಕ

karnataka

ETV Bharat / state

ಅಪಘಾತ ವಲಯಗಳಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಿಯಾಯೋಜನೆ: ಜಿಲ್ಲಾಧಿಕಾರಿ

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 36 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಸಮಸ್ಯೆಯನ್ನು ಕೇವಲ ತಾತ್ಕಾಲಿಕವಾಗಿ ಪರಿಹರಿಸುವುದು ಮಾತ್ರವಲ್ಲ, ಶಾಶ್ವತ ಪರಿಹಾರಾತ್ಮಕ ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

By

Published : Jun 9, 2020, 5:51 AM IST

accident zones
ಅಪಘಾತ ವಲಯ

ಚಿತ್ರದುರ್ಗ: ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಅಪಘಾತಗಳ ಸಂಖ್ಯೆಗಳನ್ನಾಧರಿಸಿ ಜಿಲ್ಲೆಯಲ್ಲಿ ಒಟ್ಟು 36 ಅಪಘಾತ ವಲಯ (ಕಪ್ಪುಚುಕ್ಕೆ ಪ್ರದೇಶ) ಗಳನ್ನಾಗಿ ಗುರುತಿಸಿಸಲಾಗಿದ್ದು, ಈ ಪ್ರದೇಶದಲ್ಲಿ ಸಮಸ್ಯೆಯನ್ನು ಕೇವಲ ತಾತ್ಕಾಲಿಕವಾಗಿ ಪರಿಹರಿಸುವುದು ಮಾತ್ರವಲ್ಲ, ಶಾಶ್ವತ ಪರಿಹಾರಾತ್ಮಕ ಕ್ರಿಯಾಯೋಜನೆ ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಅಪಘಾತಗಳಿಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ, ಪೊಲೀಸ್, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಗಳನ್ನು ಒಳಗೊಂಡ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿದ್ದು, ಸಮೀಕ್ಷೆಯಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿರುವ ಒಟ್ಟು 36 ಪ್ರದೇಶಗಳನ್ನು ಗುರುತಿಸಲಾಗಿದೆ.

ಪ್ರತಿ ಪ್ರದೇಶದ 500 ಮೀ. ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸಿರುವುದು ಪತ್ತೆಯಾಗಿದೆ. ಇಂತಹ ಅಪಘಾತ ವಲಯಗಳನ್ನು ಗುರುತಿಸಿ, ಪರಿಹಾರ ಕ್ರಮಗಳನ್ನು ಸೂಚಿಸುವಂತೆ ಸಮೀಕ್ಷಾ ತಂಡಕ್ಕೆ ತಿಳಿಸಲಾಗಿತ್ತು. ಸಮೀಕ್ಷಾ ತಂಡವು ಕೇವಲ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಮಾತ್ರ ಸೂಚಿಸಿದ್ದು, ಇದರಿಂದ ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ. ಹೀಗಾಗಿ ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಶಾಶ್ವತ ಪರಿಹಾರಾತ್ಮಕ ಕ್ರಿಯಾ ಯೋಜನೆ ತಯಾರಿಸಿ, ಅನುಮೋದನೆಗಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಯವರು ಜಂಟಿ ಸಮೀಕ್ಷಾ ತಂಡದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details