ಕರ್ನಾಟಕ

karnataka

ETV Bharat / state

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ನಲ್ಲಿ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ದಾಖಲು - chitradurga swamiji case

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಎರಡನೇ ಪೋಕ್ಸೋ ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿಯರು ಇಂದು ಕೋರ್ಟ್​ನಲ್ಲಿ ಹೇಳಿಕೆ ದಾಖಲಿಸಿದರು.

ಮುರುಘಾ ಶ್ರೀ
ಮುರುಘಾ ಶ್ರೀ

By

Published : Oct 25, 2022, 9:54 PM IST

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ನ್ಯಾಯಾಧೀಶರೆದುರು ಸಂತ್ರಸ್ತ ಬಾಲಕಿಯರು ಹೇಳಿಕೆ ದಾಖಲಿಸಿದ್ದಾರೆ.

ಮುರುಘಾ ಮಠದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯು ತನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮುರುಘಾ ಶರಣರ ವಿರುದ್ಧ ಅಕ್ಟೋಬರ್ 14ರಂದು ಮೈಸೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಮಂಗಳವಾರ ಸಂತ್ರಸ್ತ ಬಾಲಕಿಯರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆಗಳನ್ನು ನೀಡಿದ್ದಾರೆ.

ಪ್ರಕರಣ ಸಂಬಂಧ 6 ಮತ್ತು 7ನೇ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಅ.28 ಕ್ಕೆ ಮುಂದೂಡಿದೆ. ಮುರುಘಾ ಶರಣರ ಸಹಾಯಕ ಮಹಾಲಿಂಗ ಈ ಪ್ರಕರಣದ 6ನೇ ಆರೋಪಿಯಾಗಿದ್ದರೆ, ಬಾಣಸಿಗ ಕರಿಬಸಪ್ಪ 7ನೇ ಆರೋಪಿ.

ಪೋಕ್ಸೋ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿ ವಿರುದ್ಧ ಮತ್ತೊಂದು ದೂರು ದಾಖಲಾಗಿತ್ತು.

ಇದನ್ನೂ ಓದಿ: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರ ನೇಮಕ: ದಾವಣಗೆರೆ ವಿರಕ್ತ ಮಠದ ಬಸವಪ್ರಭು ಹೆಸರು ಅಂತಿಮ

ABOUT THE AUTHOR

...view details