ಚಿತ್ರದುರ್ಗ:ಚಿತ್ರದುರ್ಗ ಮುರುಘಾಮಠದ ಶ್ರೀ ವಿರುದ್ಧದ ಪೋಕ್ಸೋ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿದ್ದು, ಅವರನ್ನು ನಿನ್ನೆ (ಗುರುವಾರ) ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎ1 ಆರೋಪಿ ಮುರುಘಾ ಶ್ರೀಗೆ ಜಾಮೀನು ಮಂಜೂರು ಮಾಡಲಾಗಿದೆ. ಸ್ವಾಮೀಜಿ ಜೈಲಿನಿಂದ ಬಿಡುಗಡೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದರ ಬೆನ್ನಲ್ಲಿಯೇ ಎ2 ಆರೋಪಿ ಮಹಿಳಾ ವಾರ್ಡನ್ ರಶ್ಮಿ ಜಾಮೀನು ಮಂಜೂರಾತಿಗೆ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿ.21ರಂದು ಮಹಿಳಾ ವಾರ್ಡನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ್ದ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿತ್ತು.