ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.
ನವೆಂಬರ್ 8ರಂದು ಒಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿದ್ದರೂ, ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದ ಕಾರಣ ಮುರುಘಾ ಶರಣರ ಬಿಡುಗಡೆಯಾಗಿರಲಿಲ್ಲ. ಇಂದು ಜೈಲಿನಿಂದ ಹೊರಬಂದಿದ್ದಾರೆ. ಚಿತ್ರದುರ್ಗ ಜೈಲಿನಿಂದ ಶ್ರೀಗಳು ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಿತ್ರದುರ್ಗದ ಕೋರ್ಟ್ಗೆ ಹಾಜರಾಗಿದ್ದರು. ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಶ್ರೀಗಳಿಗೆ ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿದ್ದರೂ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಚಿತ್ರದುರ್ಗದಲ್ಲಿ ಇರುವಂತಿಲ್ಲ ಎಂಬ ಷರತ್ತು ಇರುವುದರಿಂದ ಶ್ರೀಗಳು ತಕ್ಷಣ ಅಲ್ಲಿಂದ ಬೇರೊಂದು ಕಡೆ ಹೋಗಬೇಕಾಗಿದೆ.