ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದ ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ಇದೇ ಗ್ರಾಮದಲ್ಲಿರುವ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ.
ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು: ಚಿಕ್ಕಜಾಜೂರು ಠಾಣೆ ಸೀಲ್ಡೌನ್
ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿದ್ದರಿಂದ ಇಡೀ ಚಿಕ್ಕಜಾಜೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಸೋಂಕು ತಗುಲಿದ ಪೊಲೀಸ್ ಕಾನ್ಸ್ಟೇಬಲ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನ ಪೊಲೀಸರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಸೋಂಕಿತ ಪೊಲೀಸ್ ಕಾನ್ಸ್‌ಟೇಬಲ್ ವಾಸವಿದ್ದ ಪೊಲೀಸ್ ಕ್ವಾಟ್ರಸ್ ಅನ್ನು ಕೂಡ ಸೀಲ್ ಡೌನ್ ಮಾಡಲಾಗಿದೆ.