ಚಿತ್ರದುರ್ಗ: ಜನ ಸಾಮಾನ್ಯರು ಮಾಡುವ ಕಾರ್ಯಕ್ರಮಗಳಿಗೆ ಕೊರೊನಾ ನಿಯಮಗಳನ್ನು ಹೇರುವ ಸರ್ಕಾರದ ನಿಯಮಾವಳಿಗಳು ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ಲವೇ? ಎಂಬ ಅನುಮಾನ ಸಾಮಾನ್ಯವಾಗಿ ಕಾಡುತ್ತಿದೆ.
ಸಾಮಾಜಿಕ ಅಂತರ ಮರೆತ ಜನಪ್ರತಿನಿಧಿಗಳು - press conference of Swarajya program
ಚಿತ್ರದುರ್ಗದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಪತ್ರಿಕಾಗೋಷ್ಠಿ ವೇಳೆ ಡಿಸಿಎಂ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಶ್ರೀ ರಾಮುಲು ಹಾಗೂ ಅರಣ್ಯ ಸಚಿವ ಆನಂದ್ ಸಿಂಗ್ ಸಾಮಾಜಿಕ ಅಂತರವನ್ನು ಮರೆತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಹೌದು, ಇದಕ್ಕೆ ಉತ್ತಮ ಉದಾಹರಣೆ ಅಂದರೆ ಇಂದು ಚಿತ್ರದುರ್ಗದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಪತ್ರಿಕಾಗೋಷ್ಠಿ. ಪತ್ರಿಕಾಗೋಷ್ಠಿ ಮುಗಿದ ಬಳಿಕ ಜೆಡಿಎಸ್ ಪಕ್ಷದ ಕೆಲ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಳ್ಳುವ ವೇಳೆ ಡಿಸಿಎಂ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಶ್ರೀ ರಾಮುಲು ಹಾಗು ಅರಣ್ಯ ಸಚಿವ ಆನಂದ್ ಸಿಂಗ್ ಸಾಮಾಜಿಕ ಅಂತರವನ್ನು ಮರೆತು ಕೊರೊನಾ ನಿಯಮವನ್ನು ಉಲ್ಲಂಘಿಸಿದರು. ಪಕ್ಷದ ಕಾರ್ಯಕರ್ತರು ಬೃಹತ್ ಗಾತ್ರದ ಹೂವಿನ ಹಾರವನ್ನು ಸಚಿವರಿಗೆ ಹಾಕುವ ವೇಳೆ ಸಾಮಾಜಿಕ ಅಂತರ ಮರೆತು ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಇನ್ನು ಸಚಿವರು ಆಗಮಸುವ ವೇಳೆ ಕೂಡ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ನಿಯಮವನ್ನು ಗಾಳಿಗೆ ತೂರಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ.