ಚಿತ್ರದುರ್ಗ :ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ.. ಸ್ಥಳದಲ್ಲೇ ಇಬ್ಬರ ದುರ್ಮರಣ.. - Private bus-car accident on National Highway 04
ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಅಪಘಾತಕ್ಕೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ..
ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 04 ರಲ್ಲಿ ಸರಣಿ ಅಪಘಾತ
ಇಂದು ಬೆಳಗಿನ ಜಾವ ಒಂದು ಖಾಸಗಿ ಬಸ್, ಎರಡು ಕಾರು ಸೇರಿದಂತೆ ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಾವೇರಿ ಜಿಲ್ಲೆ ಮೂಲದ ಲತಾ(28) ಹಾಗೂ ಬೆಂಗಳೂರಿನ ಅತ್ತಿಬೆಲೆ ನಿವಾಸಿ ಶಶಿಕುಮಾರ್(34) ಕೊನೆಯುಸಿರೆಳೆದಿದ್ದಾರೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಅಪಘಾತಕ್ಕೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.