ಕರ್ನಾಟಕ

karnataka

ಖಾಸಗಿ ಬಸ್ ಪಲ್ಟಿ.. ತಪ್ಪಿದ ಭಾರಿ ಅನಾಹುತ..

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದೊಗ್ಗನಾಳು ಗ್ರಾಮದ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ‌ ಖಾಸಗಿ ಬಸ್ ಪಲ್ಟಿಯಾಗಿದೆ.

By

Published : Nov 25, 2019, 1:33 PM IST

Published : Nov 25, 2019, 1:33 PM IST

ಖಾಸಗಿ ಬಸ್ ಪಲ್ಟಿ

ಚಿತ್ರದುರ್ಗ:ಚಾಲಕನ ನಿಯಂತ್ರಣ ತಪ್ಪಿ‌ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದೊಗ್ಗನಾಳು ಗ್ರಾಮದ ಗೇಟ್ ಬಳಿ ನಡೆದಿದೆ.

ಬಸ್​​ ಉರುಳಿದ ರಭಸಕ್ಕೆ15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಖಾಸಗಿ ಬಸ್ ಪಲ್ಟಿ

ಪಲ್ಟಿಯಾದ ಖಾಸಗಿ ಬಸ್ ಹೊಳಲ್ಕೆರೆ ತಾಲೂಕಿನಿಂದ ಭದ್ರಾವತಿ ಮುಖೇನ ಬಳ್ಳಾರಿಗೆ ಹೋಗುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details