ಚಿತ್ರದುರ್ಗ: ಇದೇ ತಿಂಗಳು 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯನ್ನು ಶಾಂತಯುತವಾಗಿ ನಡೆಸಲು ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 87 ಪರೀಕ್ಷಾ ಕೇಂದ್ರಗಳ ಪೈಕಿ ನಗರದಲ್ಲಿ 25, ಚಳ್ಳಕೆರೆ 18, ಹೊಸದುರ್ಗ 12, ಹೊಳಲ್ಕೆರೆ 11, ಮೊಳಕಾಲ್ಮೂರು 07, ಹಿರಿಯೂರು 14 ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಇನ್ನು ಶಾಲೆಗಳ ಬಳಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.