ಚಿತ್ರದುರ್ಗ:ಬೆಳಗಾವಿಯ ಪೀರವಾಡಿ ಗಲ್ಲಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ಡಿಸಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಸಂಗೊಳ್ಳಿ ರಾಯಣ್ಣನ ಪುತ್ಥಳಿ ಸ್ಥಾಪಿಸಲು ಬೆಳಗಾವಿ ಜಿಲ್ಲಾಡಳಿತ ವಿರೋಧ: ಚಿತ್ರದುರ್ಗದಲ್ಲಿ ಪ್ರತಿಭಟನೆ - protest against belagavi administration
ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ವಿರೋಧ ವ್ಯಕ್ತಪಡಿಸುತ್ತಿರುವ ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಚಿತ್ರದುರ್ಗದ ಡಿಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪುತ್ಥಳಿಗೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದ ಬೆಳಗಾವಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಯನ್ನು ಬಗೆಹರಿಸುವಂತೆ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಳಗಾವಿ ನಗರದಲ್ಲಿ ಸಂಭಾಜಿ, ಶಿವಾಜಿ, ತಾನಾಜಿ ಅವರ ಪ್ರತಿಮೆ ಪ್ರತಿಷ್ಠಾಪಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತ ತುಟಿ ಬಿಚ್ಚಿರಲಿಲ್ಲ. ಅದೇ ಊರಿನಲ್ಲಿ ಜನಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡ್ಡಿಪಡಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು.