ಚಿತ್ರದುರ್ಗ: ಬಿಜೆಪಿಯು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - jds
ಪ್ರತಿಭಟನಾಕಾರರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನಾಕಾರರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಕೈ ಕಾರ್ಯಕರ್ತರು ಕಿಡಿಕಾರಿದರು. ಚಿತ್ರದುರ್ಗ ಜಿಲ್ಲಾಧ್ಯಕ್ಷ ಪಾಥೇರಾಜನ್ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಅಧ್ಯಕ್ಷರು ಆಕ್ರೋಶ ಹೊರಹಾಕಿದರು.