ಚಿತ್ರದುರ್ಗ:ದೇಶದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿರುವ ಸಿಎಎ, ಎನ್ಆರ್ಸಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ.
ಸಿಎಎ, ಎನ್ಆರ್ಸಿಗೆ ವಿರೋಧ: ಚಿತ್ರದುರ್ಗದಲ್ಲಿ 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ - ChitradurgaProtest news
ಸಿಎಎ, ಎನ್ಆರ್ಸಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಚಿತ್ರದುರ್ಗದಲ್ಲಿ ನಡೆಯುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ.
ಚಿತ್ರದುರ್ಗದಲ್ಲಿ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ನೋಂದಣಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ 13 ದಿನಗಳಿಂದ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.
ಚಿತ್ರದುರ್ಗ ಮುಸ್ಲಿಂ ವಕೀಲರ ವೆಲ್‌ಫೇರ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಕೀಲರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.