ಚಿತ್ರದುರ್ಗ: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ಓದಿ: ಕೈ ನಾಯಕನ ಕಾರ್ಯವೈಖರಿ ನೆನೆದು ಭಾವುಕರಾದ ಮೋದಿ: 'ಗುಲಾಮ್ಗೆ ಸಲಾಂ' ಎಂದ ಅಠಾವಳೆ

ನಗರದ ಗಾಂಧಿ ವೃತ್ತದಲ್ಲಿ ಎಮ್ಮೆಗೆ ಜಿಲ್ಲೆಯ ಜನಪ್ರತಿನಿಧಿಗಳ ಫೋಟೋ ಹಾಕಿ ಮೆರವಣಿಗೆ ಮೂಲಕ ಆಕ್ರೋಶ ಹೊರಹಾಕಿದರು. ಜಿಲ್ಲೆಗೆ ಮೆಡಿಕಲ್ ಕಾಲೇಜು ಆಗಬೇಕು. ಆದರೆ ಜಿಲ್ಲೆಯ ಜನಪ್ರತಿನಿಧಿಗಳು ಕಾಲೇಜು ನಿರ್ಮಾಣಕ್ಕೆ ಒಲವು ತೋರುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ ಸರ್ಕಾರ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಸರ್ಕಾರ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು.
ಎಮ್ಮೆ ತೆಗೆದುಕೊಂಡು ಪ್ರತಿಭಟನೆ ನಡೆಸುವ ವಿಚಾರವಾಗಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ನಡೆವೆ ಮಾತಿ ಚಕಮಕಿ ನಡೆಯಿತು. ಬಳಿಕ ಡಿಸಿ ಸರ್ಕಲ್‌ವರೆಗೂ ಪಾದಯಾತ್ರೆ ಮೂಲಕ ತೆರಳುವಂತೆ ಪೊಲೀಸರು ಪ್ರತಿಭಟನಾಕಾರರಿಗೆ ಸೂಚಿಸಿದರು. ಬಳಿಕ ಜಿಲ್ಲೆಯ ಜನಪ್ರತಿನಿಧಿಗಳು ಪ್ರತಿಭಟನೆ ಹತ್ತಿಕ್ಕಲು ಮುಂದಾಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಹರಿಹಾಯ್ದರು.
ಇನ್ನು ಕೋಟೆನಾಡಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿ, ವೈದ್ಯರಾಗುವ ಕನಸು ಹೊತ್ತ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುಬೇಕು. ತಕ್ಷಣವೇ ಜಿಲ್ಲೆಯ ಶಾಸಕರು, ಸಂಸದರು ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ಕ್ರಮಕ್ಕೆ ಮುಂದಾಗುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದರು.