ಚಿತ್ರದುರ್ಗ : ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ - Protest from Farmers against Land Reform Act Amendment in chitradurga
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಿಂದ ಓಬವ್ವ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದನ್ನು ಖಂಡಿಸಿದರು.
![ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ Protest from Farmers against Land Reform Act Amendment](https://etvbharatimages.akamaized.net/etvbharat/prod-images/768-512-7651586-224-7651586-1592384631530.jpg)
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಸಣ್ಣ ಅತೀ ಸಣ್ಣ ಜಮೀನು ಹೊಂದಿರುವ ರೈತರು ಭಾಗಿಯಾಗಿ ಸರ್ಕಾರದ ನೀತಿ ಖಂಡಿಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ಪ್ರತಿಭಟನೆ
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ಒನಕೆ ಓಬವ್ವ ವೃತ್ತದವರೆಗೆ ಸಾಗಿ ಬಂತು. ಭೂ ಸುಧಾರಣಾ ಕಾಯ್ದೆಯನ್ನು ಸರ್ಕಾರ ತಿದ್ದುಪಡಿ ಮಾಡಲು ಮುಂದಾಗಿದ್ದರಿಂದ ಸಣ್ಣ ಅತೀ ಸಣ್ಣ ರೈತರಿಗೆ ತೊಂದರೆಯಾಗಲಿದೆ. ರೈತರು ಬೀದಿಗೆ ಬೀಳಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.