ಚಿತ್ರದುರ್ಗ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಾಪುರ ಗ್ರಾಮದಲ್ಲಿ ದಲಿತ ವ್ಯಕ್ತಿಯನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಪ್ರತಿಭಟನೆ - kannadanews
ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಚಿತ್ರದುರ್ಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಖಂಡಿಸಿ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಅಂಬೇಡ್ಕರ್ ಸೇನೆ ಸಂಘಟನೆಯ ಪದಾಧಿಕಾರಿಗಳು ದಲಿತ ವ್ಯಕ್ತಿ ಪ್ರತಾಪ್ ಎಂಬುವವ ದೇವಸ್ಥಾನದಲ್ಲಿ ದಾಂಧಲೆ ನಡೆಸಿದ್ದಾನೆಂದು ಸವರ್ಣೀಯರು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿದರು. ಇದನ್ನು ಖಂಡಿಸಿದ ಅಂಬೇಡ್ಕರ್ ಸೇನೆ ಇದೀಗ ಅರೆಬೆತ್ತಲೆಯಾಗಿ ಪ್ರತಿಭಟಿಸುವ ಮೂಲಕ ಕೃತ್ಯ ಎಸಗಿದವರನ್ನು ಗಡಿಪಾರು ಮಾಡಬೇಕೆಂದು ಮನವಿ ಮಾಡಿಕೊಂಡರು. ಇನ್ನು ಇಂತಂಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.