ಕರ್ನಾಟಕ

karnataka

ETV Bharat / state

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಅಂಜುಮನ್ ಕಮಿಟಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Protest in Chitradurga
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

By

Published : Dec 25, 2019, 8:21 AM IST

ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಅಲ್ಪಸಂಖ್ಯಾತರೂ ಸೇರಿದಂತೆ ಇತರರು ಚಿತ್ರದುರ್ಗದಲ್ಲಿ ಭಾರಿ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು.

ಅಂಜುಮನ್ ಕಮಿಟಿಯಿಂದ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಸಾಕಷ್ಟು ಜನರು ಭಾಗಿಯಾಗಿದ್ದು, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಕಾಯ್ದೆ ರದ್ದುಗೊಳಿಸುವಂತೆ ಒತ್ತಾಯಿಸಿದರು.

ನಗರದ ಬಿಡಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ನೀಡದ ಕಾರಣ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಬಿ.ಡಿ. ರಸ್ತೆಯಲ್ಲೇ ತೆರಳುವ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ ಎಂದು ಪಟ್ಟುಹಿಡಿದ ಪ್ರತಿಭಟನಾಕಾರರಿಗೆ ಎಸ್ಪಿ ಡಾ.ಅರಣ್ ಸಮಜಾಯಿಷಿ ನೀಡಿ ಮಾರ್ಗ ಬದಲಿಸಿದರು.

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ

ನಗರದ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಡಿ.ಸಿ. ವೃತ್ತ ತಲುಪುವ ಮೂಲಕ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶಿಸಿದರು.

ಸಮಾವೇಶದ ಬಳಿಕ ಜಿಲ್ಲಾಧಿಕಾರಿ ವಿನೋತ್ ಪ್ರಿಯಾರವರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಕಾಂಗ್ರೆಸ್‌ನ ಮಾಜಿ ಸಂಸದ ಬಿ.ಎನ್​.ಚಂದ್ರಪ್ಪ, ಚಳ್ಳಕೆರೆ ಶಾಸಕ ರಘುಮೂರ್ತಿ, ದಾವಣಗೆರೆ ಎಂಎಲ್​ಸಿ ಅಬ್ದುಲ್‌ ಜಬ್ಬಾರ್ ಭಾಗಿಯಾಗಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ABOUT THE AUTHOR

...view details