ಚಿತ್ರದುರ್ಗ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ
ಇದೇ ತಿಂಗಳು 9 ರಂದು ಗೋಣಿ ಚೀಲದಲ್ಲಿ ಬಾಲಕಿ ಶವವಾಗಿ ಸಿಕ್ಕಿದ್ದು ಇದೊಂದು ಪೈಶಾಚಿಕ ಕೃತ್ಯವಾಗಿದೆ. ಸಂಬಂಧಪಟ್ಟ ಇಲಾಖೆ ಈ ಘಟನೆಯ ಕುರಿತು ತನಿಖೆ ಚುರುಕುಗೊಳಿಸುವ ಮೂಲಕ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.