ಚಿತ್ರದುರ್ಗ: ಉತ್ತರಪ್ರದೇಶದ ಹಾಥ್ರಾಸ್‌ನ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟಿಸಲಾಯಿತು.
ಉತ್ತರಪ್ರದೇಶ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆಂದು ಸಿಐಟಿಯು ಹಾಗೂ ಸ್ಲಂ ಜನಾಂದೋಲನ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.
ಹಥ್ರಾಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಪ್ರತಿಭಟನೆ ನಗರದ ಡಿಸಿ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ದಲಿತ ಯುವತಿ ಮೇಲಾದ ದೌರ್ಜನ್ಯ ಖಂಡಿಸಿ ತಕ್ಷಣ ತನಿಖೆ ನಡೆಸುವ ಮೂಲಕ ಆರೋಪಿಗಳನ್ನ ಗಲ್ಲಿಗೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಠಾಕೂರ್ ಸಮುದಾಯದ ಮುಖಂಡರ ಒತ್ತಡಕ್ಕೆ ಮಣಿಯದೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಲಾಯಿತು.