ಚಿತ್ರದುರ್ಗ: ದೇಶ ಮತ್ತು ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಇವಿಎಂ ಗಳನ್ನು ತಕ್ಷಣವೇ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಬಳಕೆಗೆ ತರುವಂತೆ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಬಳಕೆಗೆ ಒತ್ತಾಯ: ಚಿತ್ರದುರ್ಗದಲ್ಲಿ ಪ್ರತಿಭಟನೆ - ಚಿತ್ರದುರ್ಗದಲ್ಲಿ ಪ್ರತಿಭಟನೆ
ದೇಶ ಮತ್ತು ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಇವಿಎಂ ಗಳನ್ನು ತಕ್ಷಣವೇ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಬಳಕೆಗೆ ತರುವಂತೆ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇವಿಎಂ ರದ್ದುಗೊಳಿಸಿ ಬ್ಯಾಲೇಟ್ ಪೇಪರ್ ಬಳಕೆಗೆ ಒತ್ತಾಯ: ಚಿತ್ರದುರ್ಗದಲ್ಲಿ ಪ್ರತಿಭಟನೆ
ಕೋಮು ಸೌಹಾರ್ದ ವೇದಿಕೆ ಮತ್ತು ನಾಗರಿಕ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಮಾಯಿಸಿದ ಮುಖಂಡರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ ಸೇರಿದ ಹೋರಾಟಗಾರರು ಇವಿಎಂ ಮಷಿನ್ ತಕ್ಷಣ ರದ್ದು ಮಾಡಿ ಮತಪತ್ರ ಚಲಾವಣೆಗೆ ತರುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.