ಚಿತ್ರದುರ್ಗ: ದೇಶದಲ್ಲಿ ಹಿಂದಿ ಹೇರಿಕೆ ಖಂಡಿಸಿ ಕರವೇ (ನಾರಾಯಣ ಗೌಡ) ಬಣದಿಂದ ಪ್ರತಿಭಟನೆ ನಡೆಸಲಾಯಿತು.
ಚಿತ್ರದುರ್ಗ: ಹಿಂದಿ ಹೇರಿಕೆ ಖಂಡಿಸಿ ಕರವೇ ಪ್ರತಿಭಟನೆ - ಚಿತ್ರದುರ್ಗದಲ್ಲಿ ಪ್ರತಿಭಟನೆ
ದೇಶದಲ್ಲಿ ಹಿಂದಿ ಹೇರಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ಹಿಂದಿ ಹೇರಿಕೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ
ಚಿತ್ರದುರ್ಗದ ಡಿಸಿ ವೃತ್ತದಲ್ಲಿ ಸೇರಿದ ಕರವೇ ಕಾರ್ಯಕರ್ತರು ಜಿಲ್ಲಾಧ್ಯಕ್ಷ ರಮೇಶ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು. ತಕ್ಷಣ ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ನಗರದ ಡಿಸಿ ವೃತ್ತದಿಂದ ಆರಂಭವಾದ ಪ್ರತಿಭಟನೆ ಜಿಲ್ಲಾಧಿಕಾರಿ ಕಚೇರಿ ತಲುಪಿ ಹಿಂದಿ ಸಪ್ತಾಹ ಕಾರ್ಯಕ್ರಮದ ಆದೇಶವನ್ನು ಹಿಂಪಡೆಯುವಂತೆ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು.