ಚಿತ್ರದುರ್ಗ : ಜಿಲ್ಲೆಯ ಹೊಸದುರ್ಗ ನಗರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ಪರ ಸಂಘಟನೆಗಳು ದಿಢೀರ್ ಬೃಹತ್ ಪ್ರತಿಭಟನೆ ನಡೆಸಿದ್ದು, ಜಮೀನುಗಳ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರಕರಣಗಳು ಎಸಿ ನ್ಯಾಯಲಯದಲ್ಲಿರುವುದರಿಂದ ಇತ್ಯರ್ಥಗೊಳಿಸುವಂತೆ ಪಟ್ಟು ಹಿಡಿದಿದ್ದರು.
ವಿವಿಧ ಬೇಡಿಕೆ ಈಡೇರಿಕೆಗಾಗಿ ಹೊಸದುರ್ಗದಲ್ಲಿ ಪ್ರತಿಭಟನೆ: ಡಿಸಿಗೆ ತಾಕೀತು ಮಾಡಿದ ಶಾಸಕರು - ಶಾಸಕ ಗೂಳಿ ಹಟ್ಟಿ ಶೇಖರ್
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ಪರ ಸಂಘಟನೆಗಳು ದಿಢೀರ್ ಅಂತಾ ಬೃಹತ್ ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರ ಮನವಿ ಆಲಿಸಿದ ಶಾಸಕ ಗೂಳಿ ಹಟ್ಟಿ ಶೇಖರ್ ಪ್ರತಿಭಟನಾ ಸ್ಥಳದಲ್ಲೇ ಜಿಲ್ಲಾಧಿಕಾರಿ ಹಾಗೂ ಎಸಿಯವರಿಗೆ ದೂರವಾಣಿ ಮೂಲಕ ಮಾತನಾಡಿ, ಇದೇ 12ರಂದು ಹೊಸದುರ್ಗಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದರು.
ಇನ್ನೂ ಪ್ರತಿಭಟನಾಕಾರರಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸಿ ಹಾಗೂ ಸ್ಥಳೀಯ ಶಾಸಕ ಗೂಳಿ ಹಟ್ಟಿ ಶೇಖರ್ ಆಗಮಿಸುವಂತೆ ಪಟ್ಟು ಹಿಡಿದಿದ್ದು, ಸಾಕಷ್ಟು ಗೊಂದಲಕ್ಕೆ ಕಾರಣವಾಯಿತು. ಪ್ರತಿಭಟನಾಕಾರರ ಬೇಡಿಕೆಯಂತೆ ಸ್ಥಳಕ್ಕಾಗಮಿಸಿದ ಶಾಸಕ ಗೂಳಿ ಹಟ್ಟಿಶೇಖರ್ ಬಳಿ ಪ್ರತಿಭಟನಕಾರರು 60 ವರ್ಷಗಳಿಂದ ಇತ್ಯರ್ಥಗೊಳ್ಳದ ಭೂ ವಿವಾದವನ್ನು ಬಗೆಹರಿಸುವಂತೆ ಮನವಿ ಮಾಡಿದರು.
ಮನವಿ ಆಲಿಸಿದ ಶಾಸಕ ಗೂಳಿಹಟ್ಟಿ ಶೇಖರ್ ಪ್ರತಿಭಟನಾ ಸ್ಥಳದಲ್ಲೇ ಜಿಲ್ಲಾಧಿಕಾರಿ ಹಾಗೂ ಎಸಿಯವರಿಗೆ ದೂರವಾಣಿ ಮೂಲಕ ಮಾತನಾಡಿ, ಇದೇ 12ರಂದು ಹೊಸದುರ್ಗಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದರು.