ಚಿತ್ರದುರ್ಗ: ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರಿಗೆ ಕೊರೊನಾ ಸೋಂಕು ತಗುಲಿದ್ದ ಕಾರಣ ರಾಂಪುರ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಕಾನ್ಸ್‌ಟೇಬಲ್‌ಗೆ ಕೊರೊನಾ ದೃಢ: ರಾಂಪುರ ಪೊಲೀಸ್ ಠಾಣೆ ಸೀಲ್‌ಡೌನ್ - Covid confirm to the police constable
ರಾಂಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಪಿಎಸ್ಐ ಸೇರಿದಂತೆ 20 ಜನ ಪೊಲೀಸರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
Ram pura police station
ಮೊಳಜಾಲ್ಮೂರು ತಾಲೂಕಿನ ರಾಂಪುರ ಗ್ರಾಮದ 27 ವರ್ಷದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಸೋಂಕು ತಗುಲಿದ್ದು ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ.
ಸೋಂಕು ತಗುಲಿದ ಕಾನ್ಸ್‌ಟೇಬಲ್‌ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಿಎಸ್ಐ ಸೇರಿದಂತೆ 20 ಜನ ಪೊಲೀಸ್ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಜೊತೆಗೆ ಸೋಂಕಿತ ವಾಸವಿದ್ದ ಪೊಲೀಸ್ ಕ್ವಾಟ್ರಸ್ ಅನ್ನು ಕೂಡ ಸೀಲ್ ಡೌನ್ ಮಾಡಲಾಗಿದೆ.