ಚಿತ್ರದುರ್ಗ :ಸಿಎಂ ಹೆಚ್ಡಿ ಕುಮಾರಸ್ವಾಮಿ ಲಾಟರಿ ಮೂಲಕ ಸಿಎಂ ಆಗಿದ್ದಾರೆ. ರಾಜ್ಯದ ಸಮ್ಮಿಶ್ರ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
’ಕುಮಾರಸ್ವಾಮಿ ಲಾಟರಿ ಸಿಎಂ’ ಶಾಸಕ ಶ್ರೀ ರಾಮುಲು ಲೇವಡಿ - ಶ್ರೀರಾಮುಲು
ಮಾಜಿ ಹಾಗೂ ಹಾಲಿ ಮುಖ್ಯಮಂತ್ರಿಗಳು ಸೇರಿ ರಾಜ್ಯದಲ್ಲಿ ಎರಡು ಸೀಟು ಗೆಲ್ಲೋಕೆ ಆಗಿಲ್ಲ. ಹೀಗಾಗಿ ಹತಾಶೆಯಿಂದ ಜನರ ವಿರುದ್ದ ಮಾತನಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಒಂದುಕಡೆ ಸಿಎಂ ಗ್ರಾಮವಾಸ್ತವ್ಯ ಮಾಡುತ್ತಾರೆ. ಇನ್ನೂಂದು ಕಡೆ ಸಾರ್ವಜನಿಕರಿಗೆ ಮತ್ತು ಪಕ್ಷದವರಿಗೆ ಬೈಯುವ ಕೆಲಸ ಮಾಡುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ದ ಶಾಸಕ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಮೊಳಕಾಲ್ಮೂರು ಪಟ್ಟಣದಲ್ಲಿ ತುಂಗಭದ್ರಾ ಹಿನ್ನೀರಿನ ಕುಡಿವ ನೀರಿನ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅನೇಕ ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಅಧಿಕಾರಿಗಳನ್ನು ವರ್ಗಾವಣೆ ಮಾಡುವ ದಂಧೆ ಮೂಲಕ ಹಣ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಐಎಂಎ ವಂಚನೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಹೆಸರು ಕೇಳಿಬಂದಿದೆ. ಭ್ರಷ್ಟ ಸಚಿವರಾದ ಡಿಕೆಶಿ ಮತ್ತು ಜಮೀರ್ ಅಹ್ಮದ್ ರಾಜೀನಾಮೆ ನೀಡಬೇಕು. ಸರ್ಕಾರಕ್ಕೆ ಪ್ರಾಮಾಣಿಕತೆ ಇದ್ದರೆ ಇವರ ರಾಜೀನಾಮೆ ಪಡೆಯಲಿ ಎಂದು ಸವಾಲ್ ಹಾಕಿದರು.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾನ ಮಾಡಿದ ಶ್ರೀರಾಮುಲು, ಮಾಜಿ ಹಾಗೂ ಹಾಲಿ ಮುಖ್ಯಮಂತ್ರಿಗಳು ಸೇರಿ ರಾಜ್ಯದಲ್ಲಿ ಎರಡು ಸೀಟು ಗೆಲ್ಲೋಕೆ ಆಗಿಲ್ಲ. ಹೀಗಾಗಿ ಹತಾಶೆಯಿಂದ ಜನರ ವಿರುದ್ದ ಮಾತನಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಒಂದುಕಡೆ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಾರೆ. ಇನ್ನೂಂದು ಕಡೆ ಸಾರ್ವಜನಿಕರಿಗೆ ಮತ್ತು ಪಕ್ಷದವರಿಗೆ ಬೈಯುವ ಕೆಲಸ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.