ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರದ ಶಾಸಕ ಹಾಗೂ ಆರೋಗ್ಯ ಸಚಿವ ಶ್ರೀ ರಾಮುಲು ಜಲಾಮೃತ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಇಂದು ಚಾಲನೆ ನೀಡಿದರು.
ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಶ್ರೀರಾಮುಲು - ಕೆರೆ ಹೂಳೆತ್ತುವ ಕಾಮಗಾರಿ
ಚಿತ್ರದುರ್ಗದ ಚಿಕ್ಕೇರಹಳ್ಳಿಗೆ ಇಂದು ಸಚಿವ ಶ್ರೀರಾಮುಲು ಭೇಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಚಿಕ್ಕೇರಹಳ್ಳಿಗೆ ಇಂದು ಭೇಟಿ ನೀಡಿದ ಸಚಿವರು, ನೀರಿಲ್ಲದೆ ಪಾಳು ಬಿದ್ದಿದ್ದ ಕೆರೆಗೆ ಕಾಯಕಲ್ಪ ಒದಗಿಸಿ, ಅಲ್ಲಿನ ಕೆಲ ಬಡವರ್ಗದ ಕೈಗಳಿಗೆ ಕೆಲಸ ನೀಡುವ ದೃಷ್ಟಿಯಿಂದ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ್ದಾಗಿ ಹೇಳಿದರು. ಹೂಳೆತ್ತುವ ಮೂಲಕ ಬಡವರ್ಗದ ಶ್ರಮಿಕರಿಗೆ ಕೆಲಸ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಜಿಲ್ಲೆಗೆ ಮಲತಾಯಿ ಧೋರಣೆ ಅನುಸರಿಸಿಕೊಂಡು ಬಂದಿದ್ದಾರೆ. ತಮಗೆ ನೆನಪಾದಾಗ ಮಾತ್ರ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವುದನ್ನ ಅಭ್ಯಾಸ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಬಳಿಕ ಶ್ರೀರಾಮುಲು ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಚ್ಚರಿಯಾಗಿದೆ.