ಕರ್ನಾಟಕ

karnataka

ETV Bharat / state

ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್​

ವ್ಯಕ್ತಿಯೋರ್ವ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಚಳ್ಳಕೆರೆ ತಾಲೂಕಿನ ಗೋಪನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

Chitradurga
ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್​

By

Published : Dec 19, 2020, 2:32 PM IST

Updated : Dec 19, 2020, 3:20 PM IST

ಚಿತ್ರದುರ್ಗ: ವಿವಾಹವಾಗುವುದಾಗಿ ನಂಬಿಸಿ ವ್ಯಕ್ತಿಯೋರ್ವ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌. ಚಳ್ಳಕೆರೆ ತಾಲೂಕಿನ ಗೋಪನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಗುರುವಾರ ತಡರಾತ್ರಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಸವರಾಜ (28) ಅತ್ಯಾಚಾರ ಕೃತ್ಯವೆಸಗಿದ ಆರೋಪಿ. ಬಾಲಕಿ ವಾಸ ಮಾಡುವ ಪ್ರದೇಶದಲ್ಲಿ ಆರೋಪಿ ಕೂಡ ವಾಸವಿದ್ದನಂತೆ. ಈ ವೇಳೆ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಊರಿನ ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗ್ತಿದೆ. ಬಾಲಕಿ ಮನೆಗೆ ಬರುತ್ತಿದ್ದಂತೆ ಅನುಮಾನಗೊಂಡ ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಓದಿ:ಯುವತಿ ಮೇಲೆ ಅತ್ಯಾಚಾರ ಆರೋಪ : ಆಟೋ ಚಾಲಕನ ಬಂಧನ

ಈ ಬಗ್ಗೆ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಬಸವರಾಜ‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Dec 19, 2020, 3:20 PM IST

ABOUT THE AUTHOR

...view details