ಕರ್ನಾಟಕ

karnataka

ETV Bharat / state

ಕ್ವಾರಂಟೈನ್‌ನಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ವರದಿ ನೆಗೆಟಿವ್: ಚಿತ್ರದುರ್ಗ ಡಿಸಿ - ಕ್ವಾರೆಂಟೈನ್ ನಲ್ಲಿ ಮೃತಪಟ್ಟ ವ್ಯಕ್ತಿಯ ವರದಿ ನೆಗೆಟಿವ್

ಕ್ವಾರಂಟೈನ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ಹೃದಾಯಘಾತದಿಂದ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.

report of a man who died in Quarantine has been negative
ಕ್ವಾರೆಂಟೈನ್ ನಲ್ಲಿ ಮೃತಪಟ್ಟ ವ್ಯಕ್ತಿಯ ವರದಿ ನೆಗೆಟಿವ್ ಬಂದಿದೆ: ಚಿತ್ರದುರ್ಗ ಡಿಸಿ

By

Published : May 17, 2020, 5:23 PM IST

ಚಿತ್ರದುರ್ಗ: ಕ್ವಾರಂಟೈನ್ ಪ್ರದೇಶದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ಆತ ಹೃದಾಯಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.

ಗುಜರಾತ್ ನಿಂದ ಆಗಮಿಸಿದ ತಬ್ಲಿಘಿ ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 55 ವರ್ಷದ ವ್ಯಕ್ತಿಯನ್ನು ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಎದೆನೋವು ಎಂಬ ಕಾರಣಕ್ಕೆ ನಿನ್ನೆ ತಪಾಸಣೆ ಮಾಡಲಾಗಿತ್ತು. ಬಳಿಕ ಇಸಿಜಿ ರಿಪೋರ್ಟ್ ನಾರ್ಮಲ್ ಬಂದಿತ್ತು. ಇಂದು ಬೆಳಗ್ಗೆ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಪರಿಕ್ಷಾ ವರದಿ ನೆಗೆಟಿವ್ ಬಂದಿದೆ.

ಮೃತ ದೇಹವನ್ನು ಅವರ ಕುಟುಂಬಕ್ಕೆ‌ ಹಸ್ತಾಂತರಿಸಲಾಗಿದೆ ಎಂದು ಡಿಸಿ ಸ್ಪಷ್ಟ ಪಡಿಸಿದರು.

ABOUT THE AUTHOR

...view details