ಚಿತ್ರದುರ್ಗ:ಅಕ್ರಮವಾಗಿ ಟಾಟಾ ಎಸಿ ವಾಹನದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಜೈ ಶ್ರೀರಾಮ್ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದವರು ರಕ್ಷಣೆ ಮಾಡಿದ್ದಾರೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕು ಕಬ್ಬಿನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿತ್ರದುರ್ಗ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ - Chitradurga
ಚಿತ್ರದುರ್ಗದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಜೈ ಶ್ರೀರಾಮ್ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದವರು ರಕ್ಷಣೆ ಮಾಡಿದ್ದಾರೆ.
ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
ಕಬ್ಬನ ಕೆರೆಯಿಂದ ತುಮಕೂರು ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಜೈ ಶ್ರೀರಾಮ್ ವಿಶ್ವಹಿಂದೂ ಪರಿಷತ್‌ನವರು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.
ಅಕ್ರಮ ಗೋ ಸಾಗಾಟ ಮಾಡುವ ದ್ರೋಹಿಗಳಿಗೆ ಶಿಕ್ಷೆಯಾಗಬೇಕು ಎಂದು ಸಂಘಟನೆಯ ಸಂಚಾಲಕ ರಾಕೇಶ್ ಶೆಟ್ಟಿಹಳ್ಳಿ, ಕಲ್ಲೇಶ್ ಹಾಗೂ ಅರುಣ್ ಬಾಗೂರ್ ಒತ್ತಾಯಿಸಿದ್ದಾರೆ.