ಕರ್ನಾಟಕ

karnataka

ETV Bharat / state

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ - Publically ganesha festival celebrates is restricted

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಲಾಗಿದೆ. ಪರಿಣಾಮ ಅದ್ಧೂರಿ ಹಿಂದೂ ಮಹಾಗಣಪತಿ ಉತ್ಸವಕ್ಕೆ ಬ್ರೇಕ್ ಬೀಳಲಿದೆ.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

By

Published : Aug 16, 2020, 7:32 PM IST

ಚಿತ್ರದುರ್ಗ:ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.

ಕೇಂದ್ರೀಯ ಗೃಹ ಮಂತ್ರಾಲಯವು ಜುಲೈ 29 ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತೆರವು-3 ಮಾರ್ಗಸೂಚಿಗಳನ್ನು ಆದೇಶಿಸಿದ್ದು, ಇವು ಆಗಸ್ಟ್ 31 ರವರೆಗೆ ಜಾರಿಯಲ್ಲಿರುತ್ತವೆ.

ಕೇಂದ್ರ ಸರ್ಕಾರವು ಹೊರಡಿಸಿರುವ ತೆರವು-3ರ ಅವಧಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಲ್ಲಿ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ ಅನುಮತಿ ನೀಡಿರುವುದಿಲ್ಲ.

ಅದರಂತೆ ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಯಥಾವತ್ತಾಗಿ ಪಾಲನೆ ಮಾಡಲು ಆದೇಶ ಹೊರಡಿಸಿದ್ದರಿಂದ ಈ ಬಾರಿ ಗಣೇಶೋತ್ಸವಕ್ಕೆ ಬ್ರೇಕ್ ಬೇಳಲಿದೆ. ಇದರ ಬಿಸಿ ಅದ್ಧೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಗಣಪತಿ ಉತ್ಸವಕ್ಕೂ ತಟ್ಟಿದ್ದು, ಅದ್ಧೂರಿಯಾಗಿ ನಡೆಯುತ್ತಿದ್ದ ಗಣೇಶೋತ್ಸವಕ್ಕೆ ಬ್ರೇಕ್ ಬೀಳಲಿದೆ.

ABOUT THE AUTHOR

...view details