ಕರ್ನಾಟಕ

karnataka

ಬೈಕ್​ ಮತ್ತು ಆಟೋ ಮಧ್ಯೆ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

By

Published : Dec 31, 2019, 8:00 AM IST

ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಹೊಟ್ಟೆಪ್ಪನಹಳ್ಳಿ ಬಳಿ ಬೈಕ್​ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಬೈಕ್​ ಮತ್ತು ಆಟೋ ಅಪಘಾತ
Road accident

ಚಿತ್ರದುರ್ಗ:ಬೈಕ್​ ಹಾಗೂ ಆಟೋ ಮಧ್ಯೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಹೊಟ್ಟೆಪ್ಪನಹಳ್ಳಿ ಬಳಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯ ನಿವಾಸಿ ರಾಘವೇಂದ್ರ (25) ಮೃತ ವ್ಯಕ್ತಿ. ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬರುತ್ತಿದ್ದ ರಾಘವೇಂದ್ರ ಅವರ ಬೈಕ್​ಗೆ ಚಳ್ಳಕೆರೆ ಮಾರ್ಗವಾಗಿ ಬರುತ್ತಿದ್ದ ಅಪ್ಪೆ ಆಟೋ ಹೊಟ್ಟೆಪ್ಪನಹಳ್ಳಿ‌ ಬಳಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details