ಚಿತ್ರದುರ್ಗ: ಸರ್ಕಾರದ ಮಾರ್ಗಸೂಚಿ ಪಾಲಿಸಿ ನಾಳೆಯಿಂದ ಜಿಲ್ಲೆಯಲ್ಲಿ 10 ಮತ್ತು 12ನೇ ತರಗತಿ ಆರಂಭ ಹಾಗೂ 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಾರ್ಯಕ್ರಮದಡಿಯಲ್ಲಿ ತರಗತಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಸಕಲ ಸಿದ್ಧತೆ
ವಿದ್ಯಾಗಮ ತರಗತಿಗೆ ಮಕ್ಕಳು ಹಾಜರಾಗಬೇಕು ಎಂಬುದು ನಿಯಮ ಕಡ್ಡಾಯವಲ್ಲ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಾತನಾಡಿದ ಅವರು, ನಾಳೆ ತರಗತಿ ಆರಂಭಿಸಲು ಶಾಲಾ-ಕಾಲೇಜುಗಳಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 486 ಪ್ರೌಢಶಾಲೆಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗುತ್ತಿದ್ದು 24146 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲಿದ್ದಾರೆ. ಈ ಪೈಕಿ 2922 ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಿದ್ದಾರೆ. ಜೊತೆಗೆ 12ನೇ ತರಗತಿಯ ವಿದ್ಯಾರ್ಥಿಗಳ ಆರೋಗ್ಯದ ಯಾವುದೇ ಪರಿಣಾಮ ಬೀರದಂತೆ ಸರ್ಕಾರದ ಮಾರ್ಗಸೂಚಿಗಳ ಪಾಲನೆಯೊಂದಿಗೆ ತರಗತಿ ಆರಂಭಿಸಲಾಗುವುದು ಎಂದರು.
ಬಳಿಕ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಏಳೆಂಟು ತಿಂಗಳ ಬಳಿಕ ಶಾಲೆಗಳು ಆಭವಾಗುತ್ತಿದ್ದು, ಸರ್ಕಾರದ ನಿರ್ದೇಶನಗಳ ಅನ್ವಯ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರದಂತೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.