ಚಿತ್ರದುರ್ಗ:ಹಿರಿಯ ಶಾಸಕ ತಿಪ್ಪಾರೆಡ್ಡಿ ಪರ ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಬ್ಯಾಟ್ ಬೀಸಿದ್ದಾರೆ. ಆರು ಬಾರಿ ಗೆಲುವು ಸಾಧಿಸಿರುವ ಶಾಸಕ ತಿಪ್ಪಾರೆಡ್ಡಿಯವರಿಗೆ ಬಿಜೆಪಿ ಅನ್ಯಾಯ ಮಾಡಿದೆಯೆಂದು ಹೆಚ್. ಆಂಜನೇಯ ಆರೋಪಿಸಿದ್ದಾರೆ.
ಶಾಸಕ ತಿಪ್ಪಾರೆಡ್ಡಿ ಪರ ಮಾಜಿ ಸಚಿವ ಆಂಜನೇಯ ಬ್ಯಾಟಿಂಗ್ - Senior legislator Thippareddy had to take a ministerial seat
ಆರು ಬಾರಿ ಗೆಲುವು ಸಾಧಿಸಿರುವ ಶಾಸಕ ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡದೆ, ಬಿಜೆಪಿ ಅನ್ಯಾಯ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವ ಹೆಚ್.ಆಂಜನೇಯ ಆರೋಪಿಸಿದ್ದಾರೆ.
ಹಿರಿಯ ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ಸಿಗಬೇಕಿತ್ತು : ಹೆಚ್.ಆಂಜನೇಯ
ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಬೇಕಿತ್ತು. ಸಚಿವ ಸ್ಥಾನ ನೀಡದಿರುವುದು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಿಪ್ಪಾರೆಡ್ಡಿ ನನ್ನೊಂದಿಗೆ ಕಾಂಗ್ರೆಸ್ ಪಕ್ಷದಲ್ಲಿದ್ದ ಆತ್ಮೀಯ ಗೆಳೆಯ, ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಕಾಂಗ್ರೆಸ್ ನಲ್ಲಿರೋ ನ್ಯಾಯ, ಬಿಜೆಪಿಯಲ್ಲಿ ಇಲ್ಲ ಅನ್ನೋದು ತಿಪ್ಪಾರೆಡ್ಡಿಗೆ ಗೊತ್ತಿಲ್ಲ. ಸಚಿವ ಸ್ಥಾನಕ್ಕಾಗಿ ಅವರು ಹಗಲುಗನಸು ಕಾಣುತ್ತಿದ್ದಾರೆಂದು ಲೇವಡಿ ಮಾಡಿದರು.