ಚಿತ್ರದುರ್ಗ:ಮಾದಕ ವ್ಯಸನ ಎಂಬುದು ಇಡೀ ಜಗತ್ತಿಗೆ ಹಾಗೂ ಮನುಕುಲಕ್ಕೆ ಆವರಿಸಿರುವ ಸಾಮಾಜಿಕ ಪಿಡುಗು ಎಂದು ಮುರುಘಾ ಮಠದ ಪೀಠಾಧಿಪತಿ ಶ್ರೀ ಶಿವಮೂರ್ತಿ ಮುರುಘಾ ಶರಣರು ಕಳವಳ ವ್ಯಕ್ತಪಡಿಸಿದ್ದಾರೆ.
ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವುದು ಸ್ವಾಗತಾರ್ಹ: ಶಿವಮೂರ್ತಿ ಮುರುಘಾ ಶರಣರು
ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ನಡೆ ಸ್ವಾಗತಾರ್ಹ. ಇಂಥ ಸಾಮಾಜಿಕ ಪಿಡುಗಿನ ವಿರುದ್ಧ ನಾವು ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ನಡೆ ಸ್ವಾಗತರ್ಹ: ಶಿವಮೂರ್ತಿ ಮುರುಘಾ ಶರಣರು
ಡ್ರಗ್ ಮಾಫಿಯಾ ಕುರಿತಂತೆ ಮುರುಘಾಮಠದಲ್ಲಿ ಪ್ರತಿಕ್ರಿಯಿಸಿದ ಅವರು, ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಮಾದಕ ವ್ಯಸನದ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ನಡೆ ಸ್ವಾಗತಾರ್ಹ. ಇಂಥ ಸಾಮಾಜಿಕ ಪಿಡುಗಿನ ವಿರುದ್ಧ ನಾವು ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದರು.
ಸ್ಯಾಂಡಲ್ವುಡ್ನಲ್ಲಿ ಬಿರುಗಾಳಿ ಎಬ್ಬಿಸಿರುವ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಹಲವು ನಟ-ನಟಿಯರ ವಿರುದ್ಧ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿಯನ್ನು ಸಿಸಿಬಿ ಪೋಲಿಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.