ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಕರೆದೊಯ್ಯಲಾಗಿದೆ. ಜೈಲಿನಲ್ಲಿ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಕಾರಣ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಐಸಿಯು ವಾರ್ಡ್‌ಗೆ ದಾಖಲು - ಶ್ರೀಗಳ ಆರೋಗ್ಯದಲ್ಲಿ ಏರುಪೇರು
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಗಂಭೀರ ಆರೋಪ ಪ್ರಕರಣದಲ್ಲಿ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಈಗಾಗಲೇ ಕೋರ್ಟ್ ಒಪ್ಪಿಸಿದೆ. ಬಳಿಕ ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದೆ.
ಶ್ರೀಗಳ ಪರ ವಕೀಲ ಉಮೇಶ್ ಪ್ರತಿಕ್ರಿಯಿಸಿ, "ನಾಳೆ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತೇವೆ. ಶ್ರೀಗಳ ಆರೋಗ್ಯ ಗಂಭೀರವಾಗಿದೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಹೃದಯ ಸಂಬಂಧಿ ಕಾಯಿಲೆ ಕೂಡಾ ಇರುವುದು ಗೊತ್ತಾಗಿದೆ. ಹೀಗಾಗಿ ಹಿರಿಯ ವೈದ್ಯರ ತಂಡ ದಾವಣಗೆರೆಯಿಂದ ಆಗಮಿಸುತ್ತಿದ್ದಾರೆ. ಅವರು ಬಂದು ಪರೀಕ್ಷೆ ನಡೆಸಿ ಸಲಹೆ ನೀಡಿದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ" ಎಂದರು.