ಚಿತ್ರದುರ್ಗ:ಮಾಜಿ ಸಿಎಂ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಅವರ ಸರ್ಕಾರ ಕೆಡವಿದ್ದು ಅವರ ಶಾಸಕರೇ ಅನ್ನೋದು ಸಿದ್ದರಾಮಯ್ಯರಿಗೆ ಗೊತ್ತಿಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬೀಳುವುದು ಒಳಿತು ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಆರೋಗ್ಯ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯಗೆ ಗೊತ್ತಿಲ್ಲ, ಅವರ ಸರ್ಕಾರ ಕೆಡವಿದ್ದು ಅವರ ಶಾಸಕರೇ : ಸಚಿವ ಶ್ರೀ ರಾಮುಲು ತಿರುಗೇಟು - ಮಾಜಿ ಸಿಎಂ ಸಿದ್ಧರಾಮಯ್ಯ
ಬಿಜೆಪಿಯಲ್ಲಿ ಬೆಂಕಿ ಬಿದ್ದಾಗ ಕಾಂಗ್ರೆಸ್ನವರು ಬರುವುದು ಬೇಕಿಲ್ಲ. ಬಿಜೆಪಿ ತತ್ವ-ಸಿದ್ಧಾಂತದ ಮೂಲಕ ಬೆಳೆದ ಪಕ್ಷವಾಗಿದ್ದು, ಬೆಂಕಿ ಬಿದ್ದಂತಹ ವೇಳೆ ಶಾಸಕರು, ಹಿರಿಯರು ಸೇರಿ ಆರಿಸಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
![ಸಿದ್ದರಾಮಯ್ಯಗೆ ಗೊತ್ತಿಲ್ಲ, ಅವರ ಸರ್ಕಾರ ಕೆಡವಿದ್ದು ಅವರ ಶಾಸಕರೇ : ಸಚಿವ ಶ್ರೀ ರಾಮುಲು ತಿರುಗೇಟು sriramulu](https://etvbharatimages.akamaized.net/etvbharat/prod-images/768-512-7447292-1042-7447292-1591101856228.jpg)
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಅಮಿತ್ ಶಾ, ಮೋದಿ, ನಡ್ಡಾರಂತಹ ರಾಷ್ಟ್ರೀಯ ನಾಯಕರಿದ್ದಾರೆ. ಕಾಂಗ್ರೆಸ್ನವರು ಏನೇ ಪಲ್ಟಿ ಹೊಡೆದರೂ ಮುಂದಿನ ಮೂರು ವರ್ಷ ಕಾಲ ನಮ್ಮದೇ ಸರ್ಕಾರ ರಾಜ್ಯದಲ್ಲಿರುತ್ತದೆ. ಕಾಂಗ್ರೆಸ್ನವರಿಗೆ ಮಾಡಲು ಏನೂ ಕೆಲಸವಿಲ್ಲ, ಈ ರೀತಿ ಮಾತಾಡೋದು ಸಹಜವಾಗಿದ್ದು, ಮುಖ್ಯಮಂತ್ರಿಯಾಗಿ ಮುಂದುವರೆಯಲು ಬಿಎಸ್ವೈ ಸಮರ್ಥರಿದ್ದಾರೆ ಎಂದರು.
ಬಿಜೆಪಿಯಲ್ಲಿ ಬೆಂಕಿ ಬಿದ್ದಾಗ ಕಾಂಗ್ರೆಸ್ನವರು ಬರುವುದು ಬೇಕಿಲ್ಲ. ಬಿಜೆಪಿ ತತ್ವ ಸಿದ್ಧಾಂತದ ಮೂಲಕ ಬೆಳೆದ ಪಕ್ಷವಾಗಿದ್ದು, ಬೆಂಕಿ ಬಿದ್ದಂತಹ ವೇಳೆ ಶಾಸಕರು, ಹಿರಿಯರು ಸೇರಿ ಆರಿಸಲಿದ್ದಾರೆ ಎಂದು ತಿಳಿಸಿದರು.
ಅದ್ಧೂರಿ ಮೆರವಣಿಗೆ ಸಮರ್ಥಿಸಿಕೊಂಡ ಶ್ರೀರಾಮುಲು:ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಮಾತ್ರ ಸೂಚಿಸಿದ್ದೆ. ಕಾರ್ಯಕರ್ತರು ಎಲ್ಲರೂ ಸೇರಿ ಈ ಕಾರ್ಯಕ್ರಮ ನಡೆಸಿದ್ದಾರೆ. ಸಾಮಾಜಿಕ ಅಂತರ ಕಾಯುವಂತೆ ನಾವೇ ಗೈಡ್ಲೈನ್ ಪಾಸ್ ಮಾಡಿದ್ದೇವೆ. ಸರ್ಕಾರದ ಗೈಡ್ಲೈನ್ನಂತೆ ನಡೆದುಕೊಳ್ಳಲು ಜನರಲ್ಲಿ ಮನವಿ ಮಾಡಿದ್ದೇನೆ ಎಂದು ಇಂದು ನಡೆದ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡರು.