ಚಿತ್ರದುರ್ಗ: ಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಹುಡುಕಾಟದಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸುಮಾರು 25 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನವಿದೆ. ಆಯಾ ಆಯಾ ಕ್ಷೇತ್ರದಲ್ಲಿ ಕಾರ್ಯಕರ್ತರು ಆಹ್ವಾನ ನೀಡುತ್ತಿದ್ದಾರೆ. ಆದರೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದು ಸಾಧ್ಯವಿಲ್ಲ. ನಮ್ಮ ಮನೆಯಲ್ಲಿ ವರುಣಾದಲ್ಲಿ ಸ್ಫರ್ಧೆ ಮಾಡಿ ಎಂದು ಹೇಳಿದ್ದಾರೆ. ಹೀಗಾಗಿ ಪಕ್ಷದಿಂದ ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಸೋಲುಕಂಡು, ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
ಕಾರ್ಯಕರ್ತರು ಆಹ್ವಾನ ನೀಡುತ್ತಿದ್ದಾರೆ-ಸಿದ್ಧರಾಮಯ್ಯ:ಇದೀಗ ಬಾದಾಮಿ ಕ್ಷೇತ್ರ ಬಿಟ್ಟು ಕೋಲಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಕೋಲಾರ ಬಿಟ್ಟು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಉತ್ಸಾಹ ತೋರಿದ್ದಾರೆ. ನನಗೆ ಸುಮಾರು 25 ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ. ಆಯಾ ಕ್ಷೇತ್ರದಲ್ಲಿ ಕಾರ್ಯಕರ್ತರು ಆಹ್ವಾನ ನೀಡುತ್ತಿದ್ದಾರೆ ಎಂದು ತಿಳಿಸಿದರು. ಇಂದು ಬಾದಾಮಿ ಕ್ಷೇತ್ರದಲ್ಲಿ ರೋಡ್ ಶೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ವಿಚಾರ ಹಾಗೂ ಟಿಕೆಟ್ ವಿಚಾರಗಳು ಸೇರಿದಂತೆ ಎಲ್ಲಾ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದೇನೆಂದು ಹೇಳಿದರು.