ಕರ್ನಾಟಕ

karnataka

ETV Bharat / state

ಮಾಜಿ ಶಾಸಕ ಗೋವಿಂದಪ್ಪ ವಿರುದ್ಧ ಎಫ್ಐಆರ್: ಕಾಂಗ್ರೆಸ್​ನಿಂದ ಮೌನ ಪ್ರತಿಭಟನೆ - ಕಾಂಗ್ರೆಸ್​ನಿಂದ ಮೌನ ಪ್ರತಿಭಟನೆ

ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ವಿರುದ್ಧ ಜಿಲ್ಲಾಡಳಿತ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿದರು.

Silent protest by congress activists
ಕಾಂಗ್ರೆಸ್ ಕಾರ್ಯಕರ್ತರಿಂದ ಮೌನ ಪ್ರತಿಭಟನೆ

By

Published : Jun 23, 2020, 5:52 PM IST

ಚಿತ್ರದುರ್ಗ:ಕಾಂಗ್ರೆಸ್​ನ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ವಿರುದ್ಧ ಜಿಲ್ಲಾಡಳಿತ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು, ಸಚಿವ ಶ್ರೀರಾಮುಲು ಅವರಿಗೆ ಒಂದು ನ್ಯಾಯ, ಮಾಜಿ ಶಾಸಕರಿಗೊಂದು ನ್ಯಾಯವೇ? ಎಂದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ತಕ್ಷಣ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು, ಇಲ್ಲವೇ ಶ್ರೀರಾಮುಲು ವಿರುದ್ಧ ಲಾಕ್​ಡೌನ್ ನಿಯಮ ಉಲ್ಲಂಘನೆ ಎಂದು ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ABOUT THE AUTHOR

...view details