ಚಿತ್ರದುರ್ಗ: ಮಂಡ್ಯದ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರು ಚಿತ್ರದುರ್ಗದಲ್ಲಿ ಇಂದು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಪರ ಪ್ರಚಾರ ನಡೆಸಿದರು.
ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಪರ ಎಂಎಲ್ಸಿ ಶ್ರೀಕಂಠೇಗೌಡ ಪ್ರಚಾರ - chitradurga latest news
ಮಂಡ್ಯದ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರು ಚಿತ್ರದುರ್ಗದಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಪರ ಪ್ರಚಾರ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ದೇವೇಗೌಡ್ರು ಸಿಎಂ ಆಗಿದ್ದಾಗ ಒಂದು ಲಕ್ಷ ಶಿಕ್ಷಕರ ನೇಮಕಾತಿ ನಡೆಸಿ ಶಿಕ್ಷಕರಿಗೆ ಉದ್ಯೋಗ ನೀಡಿದ್ದರು. ಅದೇ ಕಾಲದಲ್ಲಿ ಶೇ 50 ರಷ್ಟು ಮಹಿಳಾ ಶಿಕ್ಷಕಿಯರಿಗೆ ಮೀಸಲಾತಿ ಕಲ್ಪಿಸಿದ್ದರು. ಅಲ್ಪಸಂಖ್ಯಾತರ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭಿಸಿದ ಕೀರ್ತಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಸಲ್ಲುತ್ತದೆ ಎಂದರು.
ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ 1,000 ಪ್ರೌಢ ಶಾಲೆ, 600 ಪದವಿಪೂರ್ವ ಕಾಲೇಜು, 160 ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಿದರು. ಜೆಡಿಎಸ್ ಪಕ್ಷ ಪ್ರಜ್ಞಾವಂತರಿಗೆ ಸಾಕಷ್ಟು ಸವಲತ್ತುಗಳನ್ನು ಮಾಡಿಕೊಟ್ಟಿದೆ. ಆದ್ದರಿಂದ ಈ ಬಾರಿ ಪ್ರಜ್ಞಾವಂತರ ಚುನಾವಣೆ ಎದುರಾಗಿದ್ದು, ಆಗ್ನೇಯ ಪದವೀಧರರ ಕ್ಷೇತ್ರದ ನಮ್ಮ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಅವರಿಗೆ ಮತ ಹಾಕಿ ಎಂದು ಮನವಿ ಮಾಡಿದರು.