ಚಿತ್ರದುರ್ಗ:ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಬಿಗ್ ಟ್ವಿಸ್ಟ್ ದೊರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಶ್ರೀಗಳ ವಿರುದ್ಧ ಆರೋಪದ ಹಿನ್ನೆಲೆಯಲ್ಲಿ ಬಾಲಕಿಯರ ವೈದ್ಯಕೀಯ ಪರೀಕ್ಷೆ ನಡೆಸಿದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿಗಳು, ಕೋರ್ಟ್ಗೆ ನೀಡಿರುವ ವರದಿಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂದು ವರದಿ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಆದರೆ, ವೈದ್ಯರು ನೀಡಿರುವ ವರದಿ ಕೋರ್ಟ್ಗೆ ಸಲ್ಲಿಕೆಯಾಗಿದ್ದು, ಬಹಿರಂಗವಾಗಿಲ್ಲ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ ಎಂದು ಹೇಳಲಾಗುತ್ತಿದೆ. ಬಾಲಕಿಯರ ತಪಾಸಣಾ ವರದಿಯಲ್ಲಿ ಯಾವುದೇ ಗಾಯಗಳು ಇಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ಕೋರ್ಟ್ಗೆ ಸಲ್ಲಿಸಿರುವ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಎನ್ನಲಾಗಿದೆ.
ಈ ನಡುವೆ ಪೊಲೀಸರು ಕೋರ್ಟ್ಗೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲೂ ಪೊಲೀಸರು ಬಾಲಕಿಯರ ಮೆಡಿಕಲ್ ವರದಿಯನ್ನು ಉಲ್ಲೇಖಿಸಿದ್ದಾರೆ. ಹೀಗಾಗಿ ಈ ಪ್ರಕರಣದಕ್ಕೆ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಏನಿದು ಪ್ರಕರಣ:ಮುರುಘಾ ಮಠದ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಮೈಸೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ದಾಖಲಾದ ಎರಡು ದಿನಗಳ ನಂತರ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಕ್ಟೋಬರ್‌ನಲ್ಲಿ ಶ್ರೀಗಳ ವಿರುದ್ಧ ಇನ್ನೂ ಕೆಲವು ಬಾಲಕಿಯರು ಇಂತಹುದೇ ದೂರು ನೀಡಿದ್ದರು.