ಚಿತ್ರದುರ್ಗ: ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಇಲ್ಲ. ಅಯೋಧ್ಯೆ ತೀರ್ಪಿಗೂ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಅಯೋಧ್ಯೆ ತೀರ್ಪಿಗೂ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ: ಬಿಎಸ್ವೈ ಸ್ಪಷ್ಟನೆ - Karnataka political development
ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಇಲ್ಲ. ಅಯೋಧ್ಯೆ ತೀರ್ಪಿಗೂ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Chief Minister BS Yeddyurappa clarified
ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ಸಾಣೇಹಳ್ಳಿ ತರಳಬಾಳು ಶಾಖಾಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವಕಕ್ಕೆ ತೆರಳುವ ಮುನ್ನ ಪ್ರತಿಕ್ರಿಯಿಸಿದ ಅವರು, ಆಯೋಧ್ಯೆ ತೀರ್ಪು ಪರ-ವಿರೋಧ ಏನೇ ಬಂದರೂ ಸ್ವೀಕರಿಸಬೇಕು ಎಂದರು.
ಇನ್ನೂ ಡಿಕೆಶಿ ಕುಟುಂಬಕ್ಕೆ ಬಿಜೆಪಿ ನಾಯಕರು, ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಶಾಖಾ ಮಠದತ್ತ ತೆರಳಿದರು.