ಚಿಂತಾಮಣಿ: ತಾಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾಗೆ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನ್ಪಡಿ ಭೇಟಿ ನೀಡಿ, ಹಣ ದುರಪಯೋಗದ ಬಗ್ಗೆ ಅವಲೋಕನ ನಡೆಸಿದರು.
ಮುರಗಮಲ್ಲಾ ದರ್ಗಾಗೆ ಕೋಟ್ಯಾಂತರ ರೂಪಾಯಿ ಬಂದರು ಬಳಕೆಯಾಗಿಲ್ಲ: ಅನ್ವರ್ ಮಾನ್ಪಡಿ ಆರೋಪ - Chintamani Murugamalla Dargah
ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಇಲ್ಲಿಗೆ ಬಂದಿದ್ದೇನೆ. ಕೋಟ್ಯಂತರ ರೂಪಾಯಿ ಬಂದ ಅನುದಾನದಿಂದ ದರ್ಗಾ ಅಭಿವೃದ್ಧಿ ಆಗಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನ್ಪಡಿ ಬೇಸರ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಇಲ್ಲಿಗೆ ಬಂದಿದ್ದೇನೆ. ಕೋಟ್ಯಂತರ ರೂಪಾಯಿ ಬಂದ ಅನುದಾನದಿಂದ ದರ್ಗಾ ಅಭಿವೃದ್ಧಿ ಆಗಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ 4 ವರ್ಷಗಳ ಹಿಂದೆ ವಕ್ಫ್ ಬೋರ್ಡ್ನ ಲಕ್ಷಾಂತರ ರೂಪಾಯಿ ಚಿಂತಾಮಣಿಯ ಸ್ಥಳೀಯ ಬ್ಯಾಂಕ್ಗೆ ವರ್ಗಾವಣೆಯಾಗಿದೆ. ಅವ್ಯವಹಾರದಲ್ಲಿ ಭಾಗಿ ಆಗಿರುವ ರಾಜ್ಯ ವಕ್ಫ್ ಮಂಡಳಿಯ ಮಾಜಿ ಸಿಇಓ ಮತ್ತು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ. ಎಲ್ಲಾ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ ಎಂದರು.